ನವೆಂಬರ್ 7ರ ಸೋಮವಾರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉಡುಪಿ ಜಿಲ್ಲಾ ಪ್ರವಾಸದ ವೇಳೆ ಕಾಪುವಿನಲ್ಲಿ ಭಾಜಪದ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಇಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ನ.7ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಪ್ರಾರಂಭ ಆಗಲಿದ್ದು,ಮುಖ್ಯಮಂತ್ರಿಯವರ ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು, ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ ಎಂದು ಹೇಳಿದ ಸಚಿವ ಅಂಗಾರ, ಇದು ಕಾರ್ಯಕರ್ತರ ಸಭೆ ಆಗಿದ್ದು, ಕಾರ್ಯಕ್ರಮದಲ್ಲಿ ಹತ್ತು ಸಾವಿರ ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.ಎಂದರು. ಮುಖ್ಯಮಂತ್ರಿ ಕಾಪು ಭೇಟಿಯ ವೇಳೆ ಏನಾದರೂ ಹೊಸ ಯೋಜನೆಯ ಪ್ರಸ್ತಾವ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ, ಸದ್ಯಕ್ಕೆ ಯಾವುದೇ ಹೊಸ ಯೋಜನೆಯ ಪ್ರಸ್ತಾವ ಇಲ್ಲ,ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಮಾತುಕತೆ ಮಾಡಲಾಗುವುದು ಎಂದರು.ಪತ್ರಿಕಾಗೋಷ್ಠಿಯಲ್ಲಿ ಕಾಪು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಸದಾನಂದ, ಶಿಲ್ಪಾ.ಜಿ.ಸುವರ್ಣ, ಗಂಗಾಧರ ಸುವರ್ಣ ಪ್ರವೀಣ್ ಪೂಜಾರಿ ಉಪಸ್ಥಿತರಿದ್ದರು.


