Site icon ಉಡುಪಿ ನ್ಯೂಸ್ ಪ್ಲಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ಯೋಜನಾ ಕಛೇರಿ ಉದ್ಘಾಟನೆ

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಇದರ ಕಾಪು ಯೋಜನಾ ಕಛೇರಿಯನ್ನು ಪಡುಬಿದ್ರಿ ಬೀಡು ಅರಸ ರತ್ನಾಕರ್ ರಾಜ್ ಅರಸ್ ಕಿನ್ಯಲ್ಕ ಬಲ್ಲಾಳ್ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಬದುಕು ಕಟ್ಟಿಕೊಳ್ಳಲು ಪ್ರೇರಣೆ ನೀಡಿದೆ. ನಿರಂತರ ಜನ ಸೇವಾ ಕಾರ್ಯಕ್ರಮಗಳೊಂದಿಗೆ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವಲ್ಲಿಯೂ ಯೋಜನೆಯ ಕಾರ್ಯಕ್ರಮಗಳು ಪೂರಕವಾಗಿವೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಡಾ| ಎಲ್. ಎಚ್. ಮಂಜುನಾಥ , ಉದ್ಯಮಿ ಸತ್ಯೇಂದ್ರ ಪೈ, ವಸಂತ ಸಾಲಿಯಾನ್, ಶಿವರಾಯ ಪ್ರಭು, ನವೀನ್ ಅಮೀನ್, ಅನಿಲ್ ಕುಮಾರ್, ಪ್ರವೀಣ್ ಕುಮಾರ್ ಗುರ್ಮೆ, ಜಯಂತಿ, ಮಮತಾ ಮತ್ತಿತರರು ಉಪಸ್ಥಿತರಿದ್ದರು.

Exit mobile version