Site icon ಉಡುಪಿ ನ್ಯೂಸ್ ಪ್ಲಸ್

ಕಾಪು ಪುರಸಭೆ : ನಗರೋತ್ಥಾನ ಯೋಜನೆಯ 2.86ಕೋ. ರೂ. ವೆಚ್ಚದ ವಿವಿಧ ಕಾಮಗಾರಿಗೆ ಚಾಲನೆ

ಕಾಪು : ಕಾಪು ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 8.50ಕೋ. ರೂ. ಅನುದಾನ ಬಿಡುಗಡೆಯಾಗಿದ್ದು ಪ್ರಥಮ ಹಂತದಲ್ಲಿ 2.86 ಕೋ. ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು. ಕಾಪು ಪುರಸಭಾ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ನಗರೋತ್ಥಾನ ಹಂತ-4ರಲ್ಲಿ ಬಿಡುಗಡೆಗೊಂಡ ವಿವಿಧ ಕಾಮಗಾರಿಗೆ ಚಾಲನೆ ನೀಡಿದರು.ಈ ಸಂದರ್ಭ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಸದಸ್ಯರಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ ಪಾದೂರು, ರತ್ನಾಕರ ಶೆಟ್ಟಿ, ಸುರೇಶ್ ದೇವಾಡಿಗ, ಶೈಲೇಶ್ ಅಮೀನ್, ನಿತಿನ್ ಕುಮಾರ್, ಉಮೇಶ್ ಕರ್ಕೇರ, ನಾಗೇಶ್, ನವೀನ್ ಪಡು, ಇಂಜಿನಿಯರ್ ನಯನತಾರ ಮತ್ತಿತರರು ಉಪಸ್ಥಿತರಿದ್ದರು.

Exit mobile version