Site icon ಉಡುಪಿ ನ್ಯೂಸ್ ಪ್ಲಸ್

ಎರ್ಮಾಳು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದ ಚಾರಿಗೆ ಬೈಕ್ ಡಿಕ್ಕಿ ಗಾಯಾಳು ಆಸ್ಪತ್ರೆಯಲ್ಲಿ ಸಾವು.

ಎರ್ಮಾಳು ಕಲ್ಯಾಣ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಆಸ್ಪತ್ರೆಯಲ್ಲಿ ಮೃತ್ತ ಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ 46 ವರ್ಷದ ದೇವಪ್ಪ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ 12 ಗಂಟೆಗೆ ಮೃತ್ತ ಪಟ್ಟಿದ್ದಾಗಿ ಪೊಲೀಸ್ ಮೂಲ ತಿಳಿಸಿದೆ. ಬೈಕ್ ಸವಾರರು ಗಾಯಗೊಂಡಿದ್ದು ಅವರು ಕೂಡ ಉಡುಪಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದಾರೆ. ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ರವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Exit mobile version