ಉಡುಪಿ ನ್ಯೂಸ್ ಪ್ಲಸ್

ಮಟ್ಟಾರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ಕಾಪು ತಾಲೂಕಿನ ಮಟ್ಟಾರ್‌ನಲ್ಲಿ ನವೆಂಬರ್ 27 ಭಾನುವಾರ ಹಿಂದೂ ಸಮಾಜೋತ್ಸವ ನಡೆಯಲಿದೆ. ಮದ್ಯಾಹ್ನ 1:30 ಶಿರ್ವ ಪೇಟೆಯಿಂದ ಬೆಳ್ಳೆ ಗ್ರಾಮದ ನಾಲ್ಕುಬೀದಿ ಜಂಕ್ಷನ್ ವರೆಗೆ ಬೃಹತ್ ಬೈಕ್ ರಾಲಿ ಮತ್ತು 2:30 ಕ್ಕೆ ನಾಲ್ಕು ಬೀದಿ ಜಂಕ್ಷನ್ ನಿಂದ ಮಟ್ಟಾರ್‌ವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಸಂಜೆ 4 ಗಂಟೆಗೆ ಮಟ್ಟಾರಿನ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಪೇಜಾವರ ಮಠಾಧೀಶರು ಮತ್ತು ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಆನೆಗುಂದಿ ಮಠದ ಶ್ರೀ ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ, ಕರಿಂಜೆ ಮಠದ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ, ಬಾಳೆಕುದ್ರು ಮಠದ ಶ್ರೀ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಖ್ಯಾತ ವಾಗ್ನಿ ಚಕ್ರವರ್ತಿ ಸೂಲಿಬೆಲೆಯವರು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಸುಮಾರು 5000 ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಜಯಪ್ರಕಾಶ್ ಪ್ರಭು ಆನಂದ್ ನಾಗೇಶ್ ರಾಜೇಂದ್ರ ಶೆಣೈ ಉಪಸ್ಥಿತರಿದ್ದರು

Exit mobile version