Site icon ಉಡುಪಿ ನ್ಯೂಸ್ ಪ್ಲಸ್

ಸಹಕಾರ ರತ್ನ ಡಾ! ಎಂ. ಎನ್. ರಾಜೇಂದ್ರ ಕುಮಾರ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿ. ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ! ಎಂ. ಎನ್. ರಾಜೇಂದ್ರ ಕುಮಾರ್ ಅವರು 27/11/2022ನೇ ಆದಿತ್ಯವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರುಶನ ಪಡೆದು ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು, ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿಯ ವತಿಯಿಂದ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಶ್ರೀನಿವಾಸ ತಂತ್ರಿಗಳ ಉಪಸ್ಥಿತಿಯಲ್ಲಿ ದೇವಿಯ ಅನುಗ್ರಹ ಪ್ರಸಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಳಕಲ್ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ದೇಗುಲದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಶಿಲಾಸೇವೆ ಎಂಬುದು ವಿಶಿಷ್ಟ ಪರಿಕಲ್ಪನೆ ಇದು ಪ್ರತಿಯೊಬ್ಬ ಭಕ್ತನು ಸಲ್ಲಿಸಬಹುದಾದ ಸೇವೆಯಾಗಿದ್ದು, ಭಕ್ತಾದಿಗಳು ನೀಡುವ ಸೇವೆಯು ಶಾಶ್ವತವಾಗಿ ಚರಿತ್ರೆಯ ಪುಟದಲ್ಲಿ ಸೇರಲಿದೆ ಎಂದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ, ಉಪಾಧ್ಯಕ್ಷರುಗಳಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಬೆಳಪು, ಶ್ರೀ ಗಂಗಾಧರ ಸುವರ್ಣ, ಶ್ರೀ ದಿವಾಕರ ಶೆಟ್ಟಿ ಕಾಪು, ಶ್ರೀ ಮಾಧವ ಆರ್ ಪಾಲನ್, ಶ್ರೀ ಲೀಲಾಧರ ಜಿ. ಶೆಟ್ಟಿ, ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘ (ನಿ) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಜೀರ್ಣೋದ್ಧಾರದ ವಿವಿಧ ಉಪ ಸಮಿತಿಯ ಮುಖ್ಯ ಸಂಚಾಲಕರು, ಸಂಚಾಲಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version