Site icon ಉಡುಪಿ ನ್ಯೂಸ್ ಪ್ಲಸ್

ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನ ಕಳವು- ಪ್ರಕರಣ ದಾಖಲು

ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ ಮಾರುತಿ ವಿಥೀಕಾ ನಿವಾಸಿ 58 ವರ್ಷದ ಬಿ.ಸತ್ಯನಾರಾಯಣ ಶೆಟ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರು ಕನಕದಾಸ ರಸೆಯಲ್ಲಿ  ಪಾಂಡುರಂಗ ಜುವೆಲ್ಲರ್ಸ್ ಎಂಬ ಆಭರಣದ ಅಂಗಡಿ ನಡೆಸುತ್ತಿದ್ದಾರೆ. ಇವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಇಬ್ಬರು ಅಪರಿಚಿತ ಮಹಿಳೆಯರು ಮತ್ತು ಓರ್ವ ಪುರುಷ ಬಂದಿದ್ದು, ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಚಿನ್ನದ ಸರದ ಮೌಲ್ಯ 22 ಸಾವಿರ ಆಗಿದೆ.ಎಂದು ದೂರಿನಲ್ಲಿ ತಿಳಿಸಲಾಗಿದೆ ಈ ಬಗ್ಗೆ ಉಡುಪಿ ನಗರ ಪೊಲೀಸ್  ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Exit mobile version