Site icon ಉಡುಪಿ ನ್ಯೂಸ್ ಪ್ಲಸ್

ಲಾರಿ ಮತ್ತು ಬೈಕ್ ನಡುವೆ ಅಪಘಾತ : ಯುವಕ ಸಾವು

ಕಟಪಾಡಿ: ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಸಹ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಕಟಪಾಡಿ ಜಂಕ್ಷನ್ ಬಳಿ ನಡೆದಿದೆ. ಉದ್ಯಾವರದ ಶಿವಾನಂದ ಭಂಡಾರಿ ಅವರ ಮಗ ಸುಶಿಕ್ಷಿತ್ ಭಂಡಾರಿ (20) ಮೃತಪಟ್ಟ ಸಹ ಸವಾರ. ಅಪಘಾತದಲ್ಲಿ ಸ್ಕೂಟಿ ಸವಾರ ಜಯದೀಪ್ ಕೈಗೆ ಗಾಯಗೊಂಡು ಉಡುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಿಗ್ಗೆ ಜಯದೀಪ್ ಹಾಗೂ ಸುಶಿಕ್ಷಿತ್ ಅವರು ಉದ್ಯಾವರದಿಂದ ಪಡುಬಿದ್ರೆ ಕಡೆ ಕ್ಯಾಟರಿಂಗ್ ಗೆ ಹೋಗುತ್ತಿದ್ದರು. ಈ ವೇಳೆ ಕಟಪಾಡಿ ಜಂಕ್ಷನ್ ನಲ್ಲಿ ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸುಶಿಕ್ಷಿತ್ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version