ಉಡುಪಿ ನ್ಯೂಸ್ ಪ್ಲಸ್

ಎಲ್ಲೂರು ಘನತ್ಯಾಜ್ಯ ವಿಲೇವಾರಿ ಘಟಕವನ್ನು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟನೆ

ಕಾಪು ಕ್ಷೇತ್ರದ ಮಹತ್ವದ ಯೋಜನೆಯಲ್ಲಿ ಒಂದಾದ ಮಾನ್ಯ ಶಾಸಕರ ವಿಶೇಷ ಮುತುವರ್ಜಿಯಿಂದ 6.31 ಕೋಟಿ ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಂಡ ಕಾಪು ಪುರಸಭೆಯ ಎಲ್ಲೂರು ಘನತ್ಯಾಜ್ಯ ವಿಲೇವಾರಿ ಘಟಕವನ್ನು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷರು ಸುಧಾಮ ಶೆಟ್ಟಿ ಮಲ್ಲಾರು,ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಜಯಂತ್ ಭಟ್, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಗುತ್ತಿಗೆದಾರರಾದ ವಾಸುದೇವ ಶೆಟ್ಟಿ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ರಾಜೇಶ್, ಪುರಸಭೆ ಸದಸ್ಯರಾದ ಅರುಣ್ ಶೆಟ್ಟಿ, ಅನಿಲ್ ಕುಮಾರ್, ನಿತಿನ್ ಕುಮಾರ್, ಪ್ರದೀಪ್ ಕುಮಾರ್, ಶೈಲೇಶ್ ಅಮೀನ್, ಚಂದ್ರ ಮಲ್ಲಾರು, ನಾಗೇಶ್ ಕುಮಾರ್, ಸರಿತಾ, ಹರಿಣಾಕ್ಷಿ ದೇವಾಡಿಗ, ಪುರಸಭೆ ಇಂಜಿನಿಯರ್ ನಯನತಾರ, ಪ್ರಮುಖರಾದ ರಮೇಶ್ ಹೆಗ್ಡೆ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸತೀಶ್ ಶೆಟ್ಟಿ ಗುಡ್ಡೆಚ್ಚಿ, ವಸಂತಿ ಮದ್ವರಾಜ್, ಹೈದರ್ ಆಲಿ, ಪುರಸಭೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು

Exit mobile version