Site icon ಉಡುಪಿ ನ್ಯೂಸ್ ಪ್ಲಸ್

ರೂ. 2 ಕೋಟಿ ವೆಚ್ಚದಲ್ಲಿ ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಅನಂತನಗರ ಹುಡ್ಕೋ ಕಾಲೋನಿ ರಸ್ತೆ ಅಭಿವೃದ್ಧಿ – ಶಾಸಕ ರಘುಪತಿ ಭಟ್ ಗುದ್ದಲಿ ಪೂಜೆ

ಉಡುಪಿ ನಗರ ಸಭಾ ವ್ಯಾಪ್ತಿಯ ಮಣಿಪಾಲ ವಾರ್ಡಿನ ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಅನಂತನಗರ ಹುಡ್ಕೋ ಕಾಲೋನಿ ರಸ್ತೆ ಅಭಿವೃದ್ಧಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ರೂ. 2 ಕೋಟಿ ಅನುದಾನ ಮಂಜೂರಾಗಿದ್ದು, ಇಂದು ದಿನಾಂಕ 15-12-2022 ರಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ, ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರಾದ ಗಿರೀಶ್, ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Exit mobile version