
ಕಾರ್ಕಳ: ಚಲಿಸುತ್ತಿದ್ದ ಖಾಸಗಿ ಬಸ್ ಗೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿಯಾಗಿ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಡಿ.26ರಂದು ಮಧ್ಯಾಹ್ನ ನಿಟ್ಟೆ ಗ್ರಾಮದ ಲಮೀನಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು ಕಾರ್ಕಳದಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂದಿನ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಗುದ್ದಿದ ಪರಿಣಾಮ ಬಸ್ಸಿನ ಹಿಂಬದಿ ಜಖಂಗೊಂಡಿದ್ದು ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ..ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ
