Site icon ಉಡುಪಿ ನ್ಯೂಸ್ ಪ್ಲಸ್

ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಇನ್ನಿಲ್ಲ

ನವದೆಹಲಿ: ಮಾಜಿ ಕೇಂದ್ರ ಸಚಿವ, ಜೆಡಿಯು ಪಕ್ಷದ ಮಾಜಿ ಅಧ್ಯಕ್ಷ ಶರದ್ ಯಾದವ್ (75) ಗುರುವಾರ ರಾತ್ರಿ ನಿಧನರಾದರು.ಶರದ್ ಯಾದವ್ ಪುತ್ರಿ ಸುಭಾಷಿಣಿ ಶರದ್ ಯಾದವ್ ಟ್ವೀಟ್‌ನಲ್ಲಿ ಈ ಮಾಹಿತಿ ನೀಡಿದ್ದು, ಪಾಪಾ ನಹೀ ರಹೇ (ತಂದೆ ಇನ್ನಿಲ್ಲ) ಎಂದು ಬರೆದಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಶರದ್‌ ಯಾದವ್‌ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಕೊನೆಯುಸಿರೆಳೆದರು. ಅಸ್ವಸ್ಥತೆಯಿಂದ ಬಳಲುತ್ತಿದ್ದ ಶರದ್‌ ಯಾದವ್‌ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಕೊನೆಯುಸಿರೆಳೆದರು.

Exit mobile version