Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ಜಿಲ್ಲಾ ಉಸ್ತುವಾರಿ ಸಮನ್ವಯ ಸಮಿತಿ ಸಭೆ (ದಿಶಾ) – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ ಜಿಲ್ಲಾ ಪಂಚಾಯತ್ ಡಾll. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ದಿನಾಂಕ 12-01-2023 ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಉಸ್ತುವಾರಿ ಸಮನ್ವಯ ಸಮಿತಿ (ದಿಶಾ) ಸಭೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಇಲಾಖಾ ಮೇಲಾಧಿಕಾರಿಗಳಿಗೆ ನಿರ್ದೇಶಕ ನೀಡಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ಮತ್ತು ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಕರಾವಳಿ ಕಾವಲು ಪಡೆಯ ಅಧೀಕ್ಷಕರಾದ ಅಬ್ದುಲ್ ಅಹದ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version