Site icon ಉಡುಪಿ ನ್ಯೂಸ್ ಪ್ಲಸ್

ಕರಾವಳಿ ಬೈಪಾಸ್ ಅಂಗನವಾಡಿ ಕೇಂದ್ರ – ಶಾಸಕ ರಘುಪತಿ ಭಟ್ ಉದ್ಘಾಟನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ನಗರ ಸಭೆ ಉಡುಪಿ ಇವರ ಸಹಯೋಗದೊಂದಿಗೆ ಜಿಲ್ಲಾ ಬಾಲಭವನ ಆವರಣದಲ್ಲಿ ನೂತನವಾಗಿ ನಿರ್ಮಾಣಿಸಿರುವ “ಕರಾವಳಿ ಬೈಪಾಸ್ ಅಂಗನವಾಡಿ ಕೇಂದ್ರದ ಉದ್ಘಾಟನೆ”ಯನ್ನು ಇಂದು ದಿನಾಂಕ 14-01-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಸಭೆಯ ಸದಸ್ಯರಾದ ಟಿ.ಜಿ ಹೆಗ್ಡೆ, ಸವಿತಾ ಹರೀಶ್ ರಾಮ್, ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ರೂಪ, ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿಗಳಾದ ವೀಣಾ, ಸಹಾಯಕ ಯೋಜನಾಧಿಕಾರಿಗಳಾದ ಕುಮಾರ್ ನಾಯ್ಕ್, ಅಂಗನವಾಡಿ ಮೇಲ್ವಿಚಾರಕಿ ಶೈಲ, ಅಂಗನವಾಡಿ ಶಿಕ್ಷಕಿ ಅನಿತಾ, ಸಹಾಯಕಿ ಗೀತಾ ಉಪಸ್ಥಿತರಿದ್ದರು.

Exit mobile version