Site icon ಉಡುಪಿ ನ್ಯೂಸ್ ಪ್ಲಸ್

ಬನ್ನಂಜೆ ಡಾll. ಬಿ.ಆರ್ ಅಂಬೇಡ್ಕರ್ ರಿಕ್ಷಾ ನಿಲ್ದಾಣ – ಶಾಸಕ ರಘುಪತಿ ಭಟ್ ಉದ್ಘಾಟನೆ

ಉಡುಪಿ ನಗರಸಭಾ ವ್ಯಾಪ್ತಿಯ ಬನ್ನಂಜೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರ ಸಹಕಾರದಿಂದ ನೂತನವಾಗಿ ನಿರ್ಮಿಸಿರುವ ಡಾll. ಬಿ.ಆರ್ ಅಂಬೇಡ್ಕರ್ ರಿಕ್ಷಾ ನಿಲ್ದಾಣವನ್ನು ಇಂದು ದಿನಾಂಕ 16-01-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ಬನ್ನಂಜೆ ಆಟೋ ರಿಕ್ಷಾ ನಿಲ್ದಾಣದ ಅಧ್ಯಕ್ಷರಾದ ಶಿವಾನಂದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version