Site icon ಉಡುಪಿ ನ್ಯೂಸ್ ಪ್ಲಸ್

ಬ್ರಹ್ಮಾವರದಲ್ಲಿ ಭೀಕರ ಅಪಘಾತ- – ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಬ್ರಹ್ಮಾವರ: ಲಾರಿಯನ್ನು ಒವರ್ ಟೇಕ್ ಮಾಡುವ ಸಂದರ್ಭದಲ್ಲಿ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪಿದ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿ  ಸಂಭವಿಸಿದೆ. ಮೃತ ವಿದ್ಯಾರ್ಥಿಗಳು ಸಮಿತ್ ಕುಮಾರ್ ಮತ್ತು ವಾಗೀಶ್ ಎಂದು ಗುರುತಿಸಲಾಗಿದೆ ಇವರು ಉಡುಪಿಯಿಂದ ಕಾಲೇಜು ಮುಗಿಸಿ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆ ಲಾರಿಯೊಂದನ್ನು ಒವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು ರಸ್ತೆಗೆ ಅಪ್ಪಳಿಸಿದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಿತ್ ಕುಮಾರ್ ಮತ್ತು ವಾಗೀಶ್ ಮೃತ ವಿದ್ಯಾರ್ಥಿಗಳು.

Exit mobile version