ಕುಂದಾಪುರ: ವಿಧಾನ ಪರಿಷತ್ ಮಾಜಿ ಸಭಾಪತಿ, ಕಾಂಗ್ರೆಸ್ ಹಿರಿಯ ಮುಖಂಡ ಪ್ರತಾಪ್ ಚಂದ್ರ ಶೆಟ್ಟಿಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ಸಂಘಟನೆಗಾಗಿ, ಯುವಕರು ಹಾಗೂ ಆಸಕ್ತರಿಗಾಗಿ ಈ ಸ್ಥಾನ ತ್ಯಜಿಸಿ ಅವಕಾಶ ಮಾಡಿಕೊಡುವ ಬಗ್ಗೆ ಪ್ರತಾಪ್ ಚಂದ್ರ ಶೆಟ್ಟಿ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
