Site icon ಉಡುಪಿ ನ್ಯೂಸ್ ಪ್ಲಸ್

ಎರ್ಮಾಳು ನಲ್ಲಿ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅಭಿಯಾನಕ್ಕೆ ಚಾಲನೆ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇವರ ನೇತೃತ್ವದಲ್ಲಿ ಎರ್ಮಾಳು ಇಂಸ್ಟೆಂಟ್ ಸೀ ರೆಸಾರ್ಟ್ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಬಿಜೆಪಿ ಉಪಾಧ್ಯಕ್ಷರು ನಯನ ಗಣೇಶ್, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷರು ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರು ಗುರ್ಮೆ ಸುರೇಶ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ, ಶ್ರೀಶ ನಾಯಕ್, ಗೀತಂಜಲಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಕೊಡಿಬೆಟ್ಟು, ಗೋಪಾಲಕೃಷ್ಣ ರಾವ್, ನಿಕಟಪೂರ್ವ ಜಿಲ್ಲಾಧ್ಯಕ್ಷರು ಮಟ್ಟಾರು ರತ್ನಾಕರ್ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು ವೀಣಾ ಶೆಟ್ಟಿ ಹಾಗೂ ವೇದಿಕೆಯಲ್ಲಿ ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು /ಪ್ರಧಾನ ಕಾರ್ಯದರ್ಶಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು

Exit mobile version