Site icon ಉಡುಪಿ ನ್ಯೂಸ್ ಪ್ಲಸ್

– ಮಲ್ಪೆ ಮೀನುಗಾರಿಕೆ ಬಂದರಿನ ಬೇಸಿನ್ ಹಾಗೂ ನೇವಿಗೇಶನ್ ಚಾನೆಲ್ ನಿರ್ವಹಣಾ ಹೂಳೆತ್ತುವಿಕೆ ಕಾಮಗಾರಿಗೆ ಸಚಿವ ಅಂಗಾರ, ಶಾಸಕ ರಘುಪತಿ ಭಟ್ ಶಂಕುಸ್ಥಾಪನೆ

ಮಲ್ಪೆ ಮೀನುಗಾರಿಕೆ ಬಂದರಿನ ಬೇಸಿನ್ ಹಾಗೂ ನೇವಿಗೇಶನ್ ಚಾನೆಲ್ ನಿರ್ವಹಣಾ ಹೂಳೆತ್ತುವಿಕೆ ಕಾಮಗಾರಿಗೆ ಇಂದು 25-01-2023 ರಂದು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಅವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ರವರು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸವಲತ್ತು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘ (ರಿ.) ಅಧ್ಯಕ್ಷರಾದ ದಯಾನಂದ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ದಿನೇಶ್, ಉಡುಪಿ ಬಂದರು ಮತ್ತು ಮೀನುಗಾರಿಕಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀನಿವಾಸ ಮೂರ್ತಿ, ಮೀನುಗಾರಿಕಾ ಇಲಾಖೆಯ ಅಪರ ನಿರ್ದೇಶಕರಾದ ಗಣೇಶ್ ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು

Exit mobile version