
ಉಡುಪಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮವು ಜ. 27 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಡೆಯಲಿದೆ. ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ ಪ್ರಯುಕ್ತ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಪ್ರವಾಸೋದ್ಯಮ, ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆಯ ಸಚಿವ ಆನಂದ್ ಸಿಂಗ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕೆ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್ ಮತ್ತು ಬಿ. ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ದಿ ಮೈಸೂರು ಎಲೆಕ್ನಿಕಲ್ ಇಂಡಸ್ಟ್ರೀಸ್ ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ ಮಂಗಳೂರು ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ ರವೀಂದ್ರ ಸುವರ್ಣ, ಯರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ ಪೂಜಾರಿ, ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಪ್ರಕಾಶ್ ಜಿ. ಟಿ ನಿಟ್ಟಾಲಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
