Site icon ಉಡುಪಿ ನ್ಯೂಸ್ ಪ್ಲಸ್

ಕಾಪು ಬೃಹತ್ ಉದ್ಯೋಗ ಮೇಳ ಜೀಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಉದ್ಘಾಟಣೆ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಇದರ ಕೌಶಲ್ಯಾಭಿವ್ರದ್ಧಿ ಮತ್ತು ಜೀವನೋಪಾಯ ಇಲಾಖೆ, ಉಡುಪಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು ಇದರ ಸಹಯೋಗದೊಂದಿಗೆ ಕಾಪು ಉದ್ಯೋಗ ಮೇಳವನ್ನು ಭಾನುವಾರ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕರ್ನಾಟಕದ ಸುಮಾರು ೪೦ ಕಂಪನಿ ಗಳು ಈ ಮೇಳದಲ್ಲಿ ಭಾಗವಹಿಸಿವೆ. ಉದ್ಯೋಗ ನೀಡುವ ಕಂಪನಿಗಳು ದಾರಿ ಕಲ್ಪಿಸಿ ಕೊಡಿ, ಉತ್ತಮ ರೀತಿಯಲ್ಲಿ ಆಯ್ಕೆ ಮಾಡಿ ಅವರ ಜೀವನಕ್ಕೆ ಅವಕಾಶ ಮಾಡಿ ಕೊಡಿ,ಒಂದುಹಸಿದ ಹೊಟ್ಟೆಗೆ ಅನ್ನ ನೀಡಿದಲ್ಲಿ ಅದು ಕ್ಷಣಿಕ ಹಸಿವನ್ನು ನೀಗಿಸಬಹುದು, ಆದರೆ ಒಂದು ಉದ್ಯೋಗ ನೀಡಿದಲ್ಲಿ ಅದು ಜೀವನ ಪೂರ್ತಿ ಹಸಿವು ನೀಗಿಸಲು ಸಹಕಾರಿಯಾದೀತು. ಇಂದುಇಲ್ಲಿಗೆ ಬಂದ ಎಲ್ಲರೂ ಉದ್ಯೋಗ ಪಡೆಯಲು ಅಸಾಧ್ಯ. ಆದರೆ ಯಾರೂ ನಿರಾಶೆ ಪಡದಿರಿ.ಇನ್ನೂ ಅವಕಾಶ ದೊರೆಯುತ್ತವೆ ಎಂದರು. ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಮಾತನಾಡಿ ಹಲವಾರು ಉದ್ಯೋಗಾಕಾಂಕ್ಷಿಗಳು ದಿನನಿತ್ಯ ಅರ್ಜಿಗಳು ಬರುತ್ತಿದ್ದ ಕಾರಣ ಮಾನ್ಯ ಸಚಿವ ಅಶ್ವಥ್ ನಾರಾಯಣ್ ಅಭಿಪ್ರಾಯ ದಂತೆ ಈ ಕಾಪು ಉದ್ಯೋಗ ಮೇಳ ಆಯೋಜಿಸಿದೆ ಇದರ ಸದುಪಯೋಗವನ್ನು ಉದ್ಯೋಗಾಕಾಂಕ್ಷಿ ಗಳು ಸದುಪಯೋಗ ಪಡೆಯಲು ಕರೆ ಕೊಟ್ಟರು. ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಮಿಕ್ಕಿ ಉದ್ಯೋಗಾಕಾಂಕ್ಷಿಗಳು ಹಾಜರಿದ್ದರು. ಅಲ್ಲದೆ ಕೆಲವು ವಿಶೇಷ ಚೇತನ ಅಭ್ಯರ್ಥಿಗಳು ಇದ್ದರು. ವೇದಿಕೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್,ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರ್,ಕಾಪು ಪುರಸಭಾ ಆಧಿ ಕಾರಿ ವೆಂಕಟೇಶ್ ನಾವಡ,ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ,ಹರ್ಷವರ್ಧನ್,ಕಿಶೋರ್ ಆಳ್ವ,ಅಶೋಕ್‌ ಶೆಟ್ಟಿ, ಮಟ್ಟಾರು ರತ್ನಾಕರ್ ಹೆಗ್ಡೆ, ಪ್ರಾಂಶುಪಾಲ ಸ್ಟೀವನ್ ಕ್ವಾರ್ಡಸ್, ಗಿರಿಧರ್ ರಾವ್ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ನಿರ್ದೇಶಕ ಗಿರಿಧರ್ ರಾವ್ ಇವರನ್ನು ಸನ್ಮಾನಿಸಲಾಯಿತು.

Exit mobile version