Site icon ಉಡುಪಿ ನ್ಯೂಸ್ ಪ್ಲಸ್

ಟರ್ಕಿಯಲ್ಲಿ ಭೀಕರ ಭೂಕಂಪ ಸಾವಿನ ಸಂಖ್ಯೆ 2400ಕ್ಕೆ ಏರಿಕೆ

ನವದೆಹಲಿ: ಟರ್ಕಿಯಲ್ಲಿ ಭೀಕರ ಭೂಕಂಪ ಸಂಭವಿಸಿದೆ. ಸುಮಾರು 2400ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.ಭಾರತ ಟರ್ಕಿಗೆ ನೆರವು ಘೋಷಿಸಿದ್ದು, 100 ಸಿಬ್ಬಂದಿ ಹಾಗೂ ವಿಶೇಷ ತರಬೇತಿ ಪಡೆದ ಶ್ವಾನದಳ, ಜತೆಗೆ ಅಗತ್ಯ ಉಪಕರಣಗಳನ್ನು ಒಳಗೊಂಡ ಎರಡು ಎನ್‌ಡಿಆರ್‌ಎಫ್ ತಂಡಗಳನ್ನು ಟರ್ಕಿಯಲ್ಲಿ ಭೂಕಂಪ ನಡೆದಿರುವ ಸ್ಥಳಕ್ಕೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಕಳುಹಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥ ರೇದ್ ಅಹ್ಮದ್ ಅವರು ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪ ಎಂದು ಕರೆದಿದ್ದಾರೆ

Exit mobile version