Site icon ಉಡುಪಿ ನ್ಯೂಸ್ ಪ್ಲಸ್

ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ – 2023 ಸಮಾರೋಪ ಸಮಾರಂಭ – ಶಾಸಕ ರಘುಪತಿ ಭಟ್ ಭಾಗಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು, ಜಿಲ್ಲಾಡಳಿತ, ಉಡುಪಿ ಜಿಲ್ಲೆ ವತಿಯಿಂದ ರಾಜ್ಯ ಮಟ್ಟದ “ಸಮಗ್ರ ಯಕ್ಷಗಾನ ಸಮ್ಮೇಳನ – 2023” ಫೆಬ್ರವರಿ 11 ಮತ್ತು 12 ರಂದು 2 ದಿನಗಳ ಕಾಲ ಎಂ.ಜಿ.ಎಂ ಮೈದಾನದಲ್ಲಿ ನಡೆದ ಯಕ್ಷಗಾನ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಇಂದು ದಿನಾಂಕ 12-02-2023 ರಂದು ಶಾಸಕರು, ಸಮಗ್ರ ಯಕ್ಷಗಾನ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.ಕಾಸರಗೋಡು ಎಡನೀರ್ ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾll. ಮೋಹನ್ ಆಳ್ವ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸಮಗ್ರ ಯಕ್ಷಗಾನ ಸಮ್ಮೇಳನದ ಅಧ್ಯಕ್ಷರಾದ ಡಾll. ಎಂ. ಪ್ರಭಾಕರ್ ಜೋಶಿ, ಕಾರ್ಯಾಧ್ಯಕ್ಷರಾದ ಜಿ.ಎಲ್ ಹೆಗ್ಡೆ, ಪ್ರಧಾನ ಸಂಚಾಲಕರಾದ ಮುರಳಿ ಕಡೆಕಾರ್, ಪಿ. ಕಿಶನ್ ಹೆಗ್ಡೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version