Site icon ಉಡುಪಿ ನ್ಯೂಸ್ ಪ್ಲಸ್

ಕಟಪಾಡಿಯ ಸಮಾಜ ಸೇವಕ ಜಯರಾಜ ಕಟಪಾಡಿ ಮತ್ತು ಸಂಗಡಿಗರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿಯ ಸಮಾಜ ಸೇವಕರಾದ ಶ್ರೀ ಜಯರಾಜ ಕಟಪಾಡಿಯವರು ಮತ್ತು ಇತರ ಸಂಗಡಿಗರು ಜೆಡಿಎಸ್ ಪಕ್ಷ  ಸೇರ್ಪಡೆಗೊಂಡರು. ಶ್ರೀಯುತರಿಗೆ ಮತ್ತು ತಂಡದ ಸದಸ್ಯರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಯೋಗೀಶ್ ವಿ ಶೆಟ್ಟಿಯವರು ಶಾಲು ಹೊದಿಸಿ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಸಂಘಟನೆಗೆ ಒತ್ತು ನೀಡುವಂತೆ ಕರೆ ನೀಡಿದರು. ಈ ಸಂದರ್ಭ ರಾಜ್ಯ ಕಾರ್ಯದರ್ಶಿಗಳಾದ ಸುಧಾಕರ ಶೆಟ್ಟಿ, ಗಂಗಾಧರ ಬಿರ್ತಿ ಮತ್ತು ಮನ್ಸೂರ್ ಇಬ್ರಾಹಿಂ,ಜಿಲ್ಲಾ ಕಾರ್ಯಾಧ್ಯಕ್ಷರಾದ ವಾಸುದೇವ ರಾವ್, ನಾಯಕರಾದ ಸಂಕಪ್ಪ ಎ,ಬಾಲಕೃಷ್ಣ ಆಚಾರ್ಯ ಕಬ್ಬೆಟ್ಟು, ಇಕ್ಬಾಲ್ ಅತ್ರಾಡಿ,ಅಶ್ರಫ್ ಪಡುಬಿದ್ರಿ ಸಂಜಯ್ ಕುಮಾರ್,ವೆಂಕಟೇಶ್ ಎಂಟಿ ಮತ್ತಿತರ ನಾಯಕರು ಉಪಸ್ಥಿತರಿದ್ದರು.

Exit mobile version