Site icon ಉಡುಪಿ ನ್ಯೂಸ್ ಪ್ಲಸ್

ಶಾಸಕ ರಘುಪತಿ ಭಟ್ ಅವರ ಕಾರ್ಯವೈಖರಿ ಮೆಚ್ಚಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತರು ಬಿಜೆಪಿ ಸೇರ್ಪಡೆ

ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದು ದಿನಾಂಕ 19-02-2023 ರಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ದಿ. ಚಂದ್ರಕಾಂತ್ ಶಣೈ ಅವರ ಮಗನಾದ ಅಭಯ್ ಶಣೈ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾದ ಸೂರ್ಯಕಾಂತ್ ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಗರ ಬಿಜೆಪಿ ಉಪಾಧ್ಯಕ್ಷರಾದ ವೆಂಕಟರಮಣ ಕಿದಿಯೂರು, ಜಿಲ್ಲಾ ಬಿಜೆಪಿ ಕೋಶಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು ಉಪಸ್ಥಿತರಿದ್ದರು.

Exit mobile version