Site icon ಉಡುಪಿ ನ್ಯೂಸ್ ಪ್ಲಸ್

ಪಡುಬಿದ್ರಿ: ಗಂಡನ ಮಾನಸಿಕ, ದೈಹಿಕ ಹಿಂಸೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ನೇಣು ಬಿಗಿದು ಮಹಿಳೆರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣದಿಂದ ನೊಂದು ಮಮತಾ (42) ಅವರು ಮನೆಯ ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೀನು ಹಾಗೂ ಮೀನಿನ ಹೊಟೇಲ್ ವ್ಯವಹಾರ ಮಾಡಿಕೊಳ್ಳುತ್ತಿದ್ದ ಬೋಳಾರದ ಮಮತಾ ಅವರನ್ನು 2011ರಲ್ಲಿ ಪಡುಬಿದ್ರಿ ಬೀಡು ನಿವಾಸಿ ಚೇತನ್ ವಿವಾಹವಾಗಿದ್ದರು. ಚೇತನ್ ಆಗಾಗ್ಗೆ ಪತ್ನಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಮಮತಾ ಮಂಗಳೂರಿನಲ್ಲಿರುವ ಅಣ್ಣ ಗಿರೀಶ್ ಸುವರ್ಣ ಅವರಿಗೆ ಮೊಬೈಲ್ ಕರೆ ಮಾಡಿ ತಿಳಿಸಿದ್ದರು ಎಂದು ಗಿರೀಶ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಆತನ ಚಿತ್ರಹಿಂಸೆಯಿಂದಲೇ ತನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ವಿರುದ್ಧ ಕ್ರಮ ಜರಗಿಸುವಂತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.

Exit mobile version