Site icon ಉಡುಪಿ ನ್ಯೂಸ್ ಪ್ಲಸ್

ವಾಲಿಬಾಲ್ ಆಟಗಾರ ಕುಸಿದು ಬಿದ್ದು ಸಾವು

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ವಾಲಿಬಾಲ್ ಆಡುತ್ತಿದ್ದ ಸಂದರ್ಭ ಯುವಕನೋರ್ವ ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ಇಂದು ಸಂಭವಿಸಿದೆ. ಮೃತರನ್ನು ಕುಕ್ಕಂದೂರು ಗ್ರಾಮದ ನಿವಾಸಿ ಸಂತೋಷ (35) ಎಂದು ತಿಳಿಯಲಾಗಿದೆ. ಕಳೆದ 4 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಹೇಳಲಾಗಿದ್ದು, ನಿನ್ನೆ ಸಂಜೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Exit mobile version