Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಅಣ್ಣಾ ಮಲೈ ಭೇಟಿ – ಪ್ರಗತಿ ರಥಕ್ಕೆ ಚಾಲನೆ

ಕರ್ನಾಟಕ ವಿಧಾನಸಭಾ ಚುನಾವಣೆಯ ರಾಜ್ಯ ಸಹ ಉಸ್ತುವಾರಿಯಾಗಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಯವರು ಇಂದು ದಿನಾಂಕ 27-02-2023 ರಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕರ್ನಾಟಕ ವಿಧಾನಸಭಾ ಚುನಾವಣೆಯ ರಾಜ್ಯ ಸಹ ಉಸ್ತುವಾರಿಯಾಗಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಅಭಿನಂದಿಸಿದರು. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ 5 ವಿಧಾನಸಭಾಕ್ಷೇತ್ರದಾದ್ಯಂತ ಸಂಚರಿಸಲಿರುವ 5 “ಪ್ರಗತಿ ರಥ”ಗಳಿಗೆ ಗಣ್ಯರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version