
ಅರವಿಂದ ಭಾಸ್ಕರ (39) ಎಂವರನ್ನು ಅವರ ಪತ್ನಿ ಹಾಗೂ ಆಕೆಯ ಪರಿಚಯಸ್ಸ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದ್ದು ಕೊಲೆ ಪುಕರಣ ದಾಖಲಿಸಿಕೊಂಡಿದ್ದಾರೆ. ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳಿಂದ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು ಅದರ ಸೆಂಟ್ರಿಂಗ್ ಕೆಲಸವನ್ನು ಯೋಗೀಶ ಗೌಡ ನಿರ್ವಹಿಸುತ್ತಿದ್ದು, ಆತ ಅರವಿಂದ ಭಾಸ್ಕರನ ಪತ್ನಿ ಆಶಾಳೊಂದಿಗೆ ಅನ್ನೋನ್ಯವಾಗಿದ್ದ ಎಂದು ತಿಳಿದುಬಂದಿದೆ. ಯೋಗೀಶ ಆಶಾಳೊಂದಿಗೆ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಪರಿಶೀಲಿಸಿದಾಗ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ
