Site icon ಉಡುಪಿ ನ್ಯೂಸ್ ಪ್ಲಸ್

ಕಾರು ಉರುಳಿ ಬಿದ್ದು ಪ್ರಯಾಣಿಕರಿಗೆ ಗಾಯ

ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಕಲ್ಲಾಪು ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು  ಉರುಳಿ ಬಿದ್ದು ಕಾರಿನಲ್ಲಿದ್ದವರು ಗಾಯಗೊಂಡಿರುವ ಘಟನೆ  ನಡೆದಿದೆ ಕೇರಳ ನೋಂದಣಿ ಹೊಂದಿರುವ ಕಾರಿನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದ್ದು, ಈ ಪೈಕಿ ಮಕ್ಕಳು ಮತ್ತು ಮಹಿಳೆಯರು ಗಾಯಗೊಂಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.ಸ್ಥಳೀಯರು ಮತ್ತು ಸಾರ್ವಜನಿಕರು ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಕರಿಸಿದ್ದಾರೆ.

Exit mobile version