ಕಾಪು ಕ್ಷೇತ್ರ ವ್ಯಾಪ್ತಿಯ ಕಟಪಾಡಿ ಗ್ರಾಮ ಪಂಚಾಯತ್ ರಾಷ್ಟ್ರೀಯ ಹೆದ್ದಾರಿ ಬಳಿ ಜಿಲ್ಲಾ ಮಟ್ಟದ ಪಲಾನುಭವಿಗಳ ಸಮಾವೇಶವನ್ನು ನಾಳೆ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದ್ದು… ಸುಮಾರು 25 ಸಾವಿರ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದು ಇದರ ಸಿದ್ಧತೆಯನ್ನು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪರಿಶೀಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರು ಜಿಲ್ಲಾ ಮಟ್ಟದ ಸಮಾವೇಶ ನಡೆಯುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಸಚಿವರು, ಶಾಸಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ, ಕಾಪು ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಸಂಖ್ಯೆಯ 94ಸಿ/94ಸಿಸಿ ಹಕ್ಕು ಪತ್ರ, ವಿವಿಧ ಪಿಂಚಣಿ ಸೌಲಭ್ಯ, ಕಾರ್ಮಿಕ ಇಲಾಖೆ, ಬಿಪಿ ಎಲ್ ಪಡಿತರ ಚೀಟಿ, ವಸತಿ ಯೋಜನೆ ಮನೆ ಮಂಜೂರಾತಿ ಪತ್ರ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯವನ್ನು ಅರ್ಹ ಪಲಾನುಭವಿಗಳಿಗೆ ವಿತರಿಸಲಾಗುವುದು ಹಾಗೂ ಕೃಷಿ ಸಮ್ಮಾನ್, ಉಜ್ವಲ, ವಿದ್ಯಾ ಸಿರಿ ಯೋಜನೆಗಳ ಸಹಿತ ಕೇಂದ್ರ ಹಾಗೂ ರಾಜ್ಯ ಸರಕಾರ ಗಳ ಜನಪ್ರಿಯ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲಿದೆ ಎಂದರು ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಜಿಲ್ಲಾಧಿಕಾರಿ ಕೂರ್ಮ ರಾವ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮಚ್ಚಿ0ದ್ರ, ಕಾಪು ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಉಡುಪಿ ತಹಸೀಲ್ದಾರ್ ರವಿ ಎ, ಕಳುಹಿಸಿ ಪೊಲೀಸ್ ವೃತ್ತ ನಿರೀಕ್ಷಕರು ಪೂವಯ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
