Site icon ಉಡುಪಿ ನ್ಯೂಸ್ ಪ್ಲಸ್

ಕಾಪು : ರಾ.ಹೆ 66ರ ಮೇಲ್ಸೇತುವೆಯಲ್ಲಿ ಬೈಕ್-ಅಂಬುಲೆನ್ಸ್ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾಪು : ರಾ.ಹೆ 66ರ ಮೇಲ್ಸೇತುವೆಯಲ್ಲಿ ಬೈಕ್-ಅಂಬುಲೆನ್ಸ್ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ ಬೈಕ್ ನಲ್ಲಿದ್ದ ಯುವಕ ಉಚ್ಚಿಲದ ನಿವಾಸಿ ರಿತೇಶ್ ದೇವಾಡಿಗ (34)ಎಂದು ಗುರುತಿಸಲಾಗಿದೆ ಯುವಕನ ಸ್ಥಿತಿ ಗಂಭೀರ ವಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ರವಿವಾರ ಮಧ್ಯಾಹ್ನ ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ರಾ.ಹೆ. 66ರ ಕಾಪುವಿನಲ್ಲಿ ನಡೆಯುತ್ತಿರುವ ರಸ್ತೆ ಮರು ಡಾಮರೀಕರಣ ಕಾಮಗಾರಿಯ ಕಾರಣದಿಂದಾಗಿ ಮಂಗಳೂರು-ಉಡುಪಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಯಿದ್ದು, ಅಂಬುಲೆನ್ಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಆಂಬ್ಯುಲೆನ್ಸ್ ನ್ನು ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದ್ದಾನೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾ

Exit mobile version