Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳ ಕಾಮಗಾರಿ ಶಾಸಕ ರಘುಪತಿ ಭಟ್ ಪರಿಶೀಲನೆ

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳ ನಿರ್ಮಾಣ ಕಾಮಗಾರಿಯನ್ನು ಇಂದು ದಿನಾಂಕ 15-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಸ್ಥಳಕ್ಕೆ ಪರಿಶೀಲನೆ ನಡೆಸಿದರು. ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ನಗರ ಸಭಾ ಸದಸ್ಯರಾದ ಗಿರೀಶ್ ಅಂಚನ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಅಭಿಯಂತರು ಮತ್ತು ಗುತ್ತಿಗೆದಾರರಾದ ನಿಹಾಲ್ ಭಟ್ ಉಪಸ್ಥಿತರಿದ್ದರು.

Exit mobile version