Site icon ಉಡುಪಿ ನ್ಯೂಸ್ ಪ್ಲಸ್

ರೂ. 3.05 ಕೋಟಿ ವೆಚ್ಚದಲ್ಲಿ ಪರ್ಕಳ ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣ – ಶಾಸಕ ರಘುಪತಿ ಭಟ್ ಗುದ್ದಲಿ ಪೂಜೆ

ಉಡುಪಿ ನಗರಸಭಾ ವ್ಯಾಪ್ತಿಯ ಪರ್ಕಳ ವಾರ್ಡಿನ ಪರ್ಕಳ ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ನಗರಸಭೆಯ ಉದ್ಯಮ ನಿಧಿಯಿಂದ ರೂ. 3.05 ಕೋಟಿ ಅನುದಾನ ಮಂಜೂರಾಗಿದ್ದು, ಇಂದು ದಿನಾಂಕ 17-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು ಹಾಗೂ ನಗರ ಸಭಾ ಸದಸ್ಯರು ಉಪಸ್ಥಿತರಿದ್ದರು.

Exit mobile version