Site icon ಉಡುಪಿ ನ್ಯೂಸ್ ಪ್ಲಸ್

ಮಹಿಷಮರ್ದಿನಿ ಉದ್ಯಾನವನ – ಶಾಸಕ ರಘುಪತಿ ಭಟ್ ಉದ್ಘಾಟನೆ

ಉಡುಪಿ ನಗರಸಭಾ ವ್ಯಾಪ್ತಿಯ ಬಡಗುಬೆಟ್ಟು ಬೈಲೂರು ವಾರ್ಡಿನಲ್ಲಿ ಸುಂದರ, ಸುಸಜ್ಜಿತವಾದ “ಮಹಿಷಮರ್ದಿನಿ ಉದ್ಯಾನವನ” ನಿರ್ಮಿಸಲು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ರೂ. 25.00 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಇಂದು ದಿನಾಂಕ 23-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ನೆರವೇರಿಸಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಬಡಗುಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಂಜಿತ ದೇವಾಡಿಗ, ಶಕ್ತಿ ಕೇಂದ್ರದ ಸಂಚಾಲಕರಾದ ರಾಜೇಶ್, ಬೂತ್ ಅಧ್ಯಕ್ಷರಾದ ಅರುಣ್ ಶೆಟ್ಟಿಗಾರ್, ಸುನೀಲ್ ರಾಜ್, ದುರ್ಗಾ ಪ್ರಸಾದ್, ಬೈಲೂರು ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮೋಹನ್ ಶೆಟ್ಟಿ ಹಾಗೂ ನಗರ ಸಭೆಯ ಪೌರಾಯುಕ್ತರಾದ ಆರ್.ಪಿ ನಾಯ್ಕ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Exit mobile version