ಕಾರವಾರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೇರಿಂಗ್ ತುಂಡಾಗಿ ಕಂದಕಕ್ಕೆ ಉರುಳಿದ ಘಟನೆ ಉತ್ತರ – ನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ 16ನೇ ಮೈಲಿಕಲ್ಡೆಬಳಿ ಘಟನೆ ನಡೆದಿದೆ. ಹಳಿಯಾಳದಿಂದ ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ 47 ಜನ ಪ್ರಯಾಣಿಕರನ್ನು ಕರೆದೊಯ್ಯುತಿದ್ದ ಬಸ್ ತಿರುವಿನಲ್ಲಿ ಚಲಿಸುತ್ತಿದ್ದ ವೇಳೆ ಸೈರಿಂಗ್ ತುಂಡಾಗಿದೆ. ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿದೆ. ಉರುಳಿದ ಬಸ್ ಮರಕ್ಕೆ ಡಿಕ್ಕಿಯಾಗಿ ತಡೆದು ನಿಂತಿದ್ದು ಪ್ರಯಾಣಿಕರು ಪಾರಾಗಿದ್ದಾರೆ
