ಬೆಂಗಳೂರು: ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್ ಅಭ್ಯರ್ಥಿಗಳ ಎಡನೇ ಪಟ್ಟಿ ಪ್ರಕಟವಾಗಿದೆ. ಇಂದು(ಏಪ್ರಿಲ್ 06) ಎಐಸಿಸಿ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ವಿಶೇಷ ಅಂದ್ರೆ ಎಡರನೇ ಪಟ್ಟಿಯಲ್ಲಿ ವಲಸಿಗರಿಗೆ ಕಾಂಗ್ರೆಸ್ ಹೈಕಮಾಮಡ್ ಮಣೆ ಹಾಕಿದೆ. ಇತ್ತೀಚೆಗೆ ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಕೆಲವರಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಲಾಗಿದೆ. ಮುಖ್ಯವಾಗಿ ಇತ್ತೀಚೆಗಷ್ಟೇ ಕೂಡ್ಲಿಗಿ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್.ವೈ ಗೋಪಾಲಕೃಷ್ಣ ಅವರಿಗೆ ಮೊಣಕಾಲ್ಮೂರು ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಭಾರೀ ಕುತೂಹಲ ಕೆರಳಿಸಿದ್ದ ಉಡುಪಿ ಕ್ಷೇತ್ರದಲ್ಲಿ ಪುಸಾದ್ ರಾಜ್ ಕಾಂಚನ್ ಟಿಕೆಟ್ ಪಡೆದರೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಧಾರವಾಡದಲ್ಲಿ ಟಿಕೆಟ್ ಪಡೆದಿದ್ದಾರೆ. ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ, ಕಲಘಟಕಿ ಕ್ಷೇತ್ರದಿಂದ ಸಂತೋಷ್ ಲಾಡ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಗಂಗಾವತಿಯಲ್ಲಿ ಇಟ್ಬಾಲ್ ಅನ್ಸಾರಿ, ಬಾದಾಮಿ ಬಿ.ಬಿ. ಚಿಮ್ಮನಕಟ್ಟಿ, ಗುಬ್ಬಿ ಕ್ಷೇತ್ರದಲ್ಲಿ ಎಸ್.ಆರ್.ಶ್ರೀನಿವಾಸ್ ಟಿಕೆಟ್ ಪಡೆದಿದ್ದಾರೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ನಡೆದ ಮ್ಯಾರಥಾನ್ ಸಭೆಗಳ ಬಳಿಕ ಬುಧವಾರವೂ ಪಟ್ಟಿ ಬಿಡುಗಡೆ ಆಗಲೇ ಇಲ್ಲ. ಅಭ್ಯರ್ಥಿಗಳ ಆಯ್ಕೆಯಲ್ಲಿ ಒಮ್ಮತ ಮೂಡದಿರುವುದೇ ವಿಳಂಬಕ್ಕೆ ಕಾರಣ. ಹೀಗಾಗಿ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನಷ್ಟೇ ಅಂತಿಮಗೊಳಿಸಿ, ಗುರುವಾರ ಬಿಡುಗಡೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.
