Site icon ಉಡುಪಿ ನ್ಯೂಸ್ ಪ್ಲಸ್

ಕರಾವಳಿಗೆ ಬಿಜೆಪಿ ಟಿಕೆಟ್‌ ಸರ್ಜರಿ ಕಾಪು -ಗುರ್ಮೆ ಸುರೇಶ್ ಶೆಟ್ಟಿ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ ಒಟ್ಟು 189 ಕ್ಷೇತ್ರಗಳಿಗೆ ಘೋಷಣೆಯಾಗಿರುವ ಟಿಕೆಟ್‌ ಪೈಕಿ, 10 ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪಿದೆ. ಇದರಲ್ಲಿ ಐದು ಹಾಲಿ ಶಾಸಕರು ಕರಾವಳಿಯವರೇ ಆಗಿದ್ದಾರೆ ಉಡುಪಿ ಕ್ಷೇತ್ರ ಯಶ್ಚಾಲ್ ಸುವರ್ಣ, ಕುಂದಾಪುರ ಕಿರಣ್ ಕುಮಾರ್ ಕೊಡ್ಗಿ, ಕಾಪು ಗುರ್ಮೆ ಸುರೇಶ್ ಶೆಟ್ಟಿ, ಮತ್ತು ಕಾರ್ಕಳದಿಂದ ಸುನೀಲ್‌ ಕುಮಾರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.

Exit mobile version