Site icon ಉಡುಪಿ ನ್ಯೂಸ್ ಪ್ಲಸ್

ಕಾರ್ಕಳ ಬ್ಲಾಕ್ ಕಾಂಗ್ರೇಸ್ ಚುನಾವಣಾ ಪ್ರಚಾರ ಸಮಿತಿ ಅದ್ಯಕ್ಷರಾಗಿ ಶುಭದರಾವ್

ರಾಜ್ಯ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ರಾಜ್ಯ ಪ್ರಚಾರ ಸಮಿತಿಯ ಅದ್ಯಕ್ಷ ಎಂ. ಬಿ. ಪಾಟೀಲ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೇಸ್ ಚುನಾವಣಾ ಪ್ರಚಾರ ಸಮಿತಿಗಳಿಗೆ ಅದ್ಯಕ್ಷರನ್ನು ನೇಮಿಸಲಾಗುತ್ತಿದೆ. ಅಂತೆಯೇ ಡಾ. ಎಂ ವೀರಪ್ಪ ಮೊಯಿಲಿಯವರ ಮಾರ್ಗದರ್ಶನದಲ್ಲಿ, ಜಿಲ್ಲಾ ಪ್ರಚಾರ ಸಮಿತಿಯ ಅದ್ಯಕರಾದ ಹರೀಶ್ ಕಿಣಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಸದಾಶಿವ ದೇವಾಡಿಗರ ಶಿಫಾರಸಿನಂತೆ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಪ್ರಚಾರ ಸಮಿತಿಯ ಸಹ ಅದ್ಯಕ್ಷರಾದ ಮಂಜುನಾಥ್ ಭಂಡಾರಿಯವರು ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೇಸ್ ವಕ್ತಾರ ಶುಭದರಾವ್ ಇವರನ್ನು ಕಾರ್ಕಳ ಬ್ಲಾಕ್ ಚುನಾವಣಾ ಪ್ರಚಾರ ಸಮಿತಿಯ ಅದ್ಯಕ್ಷರಾಗಿ ನೇಮಿಸಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ‌ ಸೇವೆ ಸಲ್ಲಿಸಿಸುತ್ತಿರುವ ಇವರು ಜನಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ

Exit mobile version