Site icon ಉಡುಪಿ ನ್ಯೂಸ್ ಪ್ಲಸ್

ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲ‌ಪಡಿಸಬೇಕಾದ ಆವಶ್ಯಕತೆಯಿದೆ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿಕೆ

ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲ‌ಪಡಿಸಬೇಕಾದ ಆವಶ್ಯಕತೆಯಿದೆ . ನಾವು ಚುನಾವಣೆಯನ್ನು ಹೇಗೆ ಗೆಲ್ಲಬಹುದುಎಂಬ ಕುರಿತು ಆಲೋಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಕೆಲಸಬೇಕಾಗಿದೆ.” ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ. ಅವರು ಇಂದು 15 ನೇ ಶೆಟ್ಟಿಬೆಟ್ಟು ವಾರ್ಡ್‍ನಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ವಾರ್ಡ್ ಹಾಗೂ ಪಂಚಾಯತ್ ಮಟ್ಟದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. “ನಮ್ಮಲ್ಲಿ ಬಹಳಷ್ಟು ಮಂದಿ ಕಾರ್ಯಕರ್ತರು ಹಾಗೂ ಮತದಾರರಿದ್ದಾರೆ. ಇವರೆಲ್ಲರ ಸಹಕಾರ ಅತ್ಯಗತ್ಯವಿದೆ. ಒಬ್ಬ ಕಾರ್ಯಕರ್ತ ಜವಾಬ್ದಾರಿ ಹೊತ್ತು ಇಬ್ಬರು ಮತದಾರರನ್ನು ವಿಶ್ವಾಸಕ್ಕೆ ತರುವಂತಹ ಕೆಲಸ ಮಾಡಬೇಕು.” ಎಂದು ಹೇಳಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ರಾಜ್ಯ ಮಾಧ್ಯಮ ಪ್ರಕೋಷ್ಠದ ಕಾರ್ಯದರ್ಶಿ ಅಮೃತ್ ಶೆಣೈ, ಕಾಂಗ್ರೆಸ್ ನಾಯಕಿ ರೋಶನಿ ಓಲಿವರ್, ಸುಕೇಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು

Exit mobile version