ಉಡುಪಿ ನ್ಯೂಸ್ ಪ್ಲಸ್

ಆರ್.ಎಸ್.ಎಸ್ ಬಜರಂಗದಳ ನ್ನು ಬೆಂಬಲಿಸಿದರೆ ಸಾವಿರಾರು ವರ್ಷಗಳ ಹಿಂದಿನ ಸತಿ ಪದ್ದತಿ ಜಾರಿಗೆ ತರಲಿದ್ದಾರೆ – ಪ್ರಸಾದ್ ಕಾಂಚನ್

ಉಡುಪಿ ಕಾಂಗ್ರೆಸ್ ಭವನದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಜಂಟಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಉಡುಪಿ ವಿ.ಸಭಾ ಕ್ಷೇತ್ರದ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ . ಇಂದು ಮಹಿಳೆಯರು ಮುಂಚೂಣಿಯಲ್ಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವನ್ನು ನೀಡುತಿದ್ದೇವೆ. ಬಿಜೆಪಿಯ ಭೃಷ್ಟಾಚಾರ – ಬೆಲೆ ಏರಿಕೆ ಪ್ರತೀ ಮಹಿಳೆಯರಿಗರ್ಥವಾಗಿದೆ. ಮಹಿಳೆಯರು ಬಿಜೆಪಿ ಸರಕಾರವನ್ನು ಬದಲಾಯಿಸಬೇಕೆನ್ನುವ ಆಶಯವನ್ನು ಹೊಂದಿದ್ದಾರೆ.” ಎಂದವರು ಹೇಳಿದರು.ಮುಂದುವರಿದು ಮಾತನಾಡಿದ ಅವರು, “ಬಜರಂಗದಳ, ಆರ್.ಎಸ್.ಎಸ್ ನ್ನು ಬೆಂಬಲಿಸಿದರೆ ಸಾವಿರಾರು ವರ್ಷಗಳ ಹಿಂದಿನ ಸತಿ ಪದ್ದತಿ ಜಾರಿಗೆ ತರಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮೈಸೂರು ವಿಭಾಗದ ಉಸ್ತುವಾರಿಗಳಾದ ನಿಧಿ ಚರ್ತುವೇದಿ, ಉಡುಪಿ ಚಿಕ್ಕಮಗಳೂರು,ಲೋಕಸಭಾ ಕ್ಷೇತ್ರದ ವೀಕ್ಷಕರಾದ ಸುದರ್ಶನ, ಕೌಶಿಕ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಹಿರಿಯ ಕಾಂಗ್ರೆಸ್‌ ನಾಯಕಿ ಸರಳಾ ಕಾಂಚನ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷರಾದ ಗೀತಾ ವಾಗ್ಲೆ, ಉಡುಪಿ ಬ್ಲಾಕ್‌ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕಾಂಗ್ರೆಸ್‌ ಮುಖಂಡರಾದ ಅಮೃತ್ ಶೆಣೈ, ವರೋನಿಕ ಕರ್ನೇಲಿಯೋ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

 

 

Exit mobile version