ಸುರತ್ಕಲ್: ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿಯವರು ಸೋಮವಾರ ಕಾಟಿಪಳ್ಳ, ಗಣೇಶಪುರ ಪರಿಸರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಮಾತಾಡಿದ ಅವರು, ಜನಸಾಮಾನ್ಯರು ಈ ಬಾರಿ ಬದಲಾವಣೆ ಬಯಸಿದ್ದಾರೆ “ಕಾಂಗ್ರೆಸ್ ನೀಡಿರುವ ಗ್ಯಾರಂಟಿಯೊಂದಿಗೆ ಮತದಾರರನ್ನು ಭೇಟಿಮಾಡಿ ಮತ ಯಾಚಿಸುತ್ತಿದ್ದೇವೆ. ಜನಸಾಮಾನ್ಯರು ಬಿಜೆಪಿ ಸರಕಾರದ ಮೇಲೆ ಭರವಸೆ ಕಳೆದುಕೊಂಡಿದ್ದಾರೆ. ಕೊರೋನ ಮಹಾಮಾರಿಯ ಬಳಿಕ ಆಹಾರ ವಸ್ತು, ಅಗತ್ಯವಸ್ತುಗಳ ಬೆಲೆ ವಿಪರೀತ ಏರಿಕೆಯಾಗಿದ್ದು ಜನರು ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಬಿಜೆಪಿ ನಾಯಕರು ಮಾತ್ರ ಏನೂ ಆಗೇ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಜನವಿರೋಧಿ ಬಿಜೆಪಿ ಸರಕಾರಕ್ಕೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.
