Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ: ನಾಮಪತ್ರ ಹಿಂದಕ್ಕೆ ಪಡೆದ ಪಕ್ಷೇತರ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕಾಂಗ್ರೆಸ್‌ ಮುಖಂಡ ಕೆ.ಕೃಷ್ಣಮೂರ್ತಿ ಆಚಾರ್ಯ ಅವರು ಸೋಮವಾರ ನಾಮಪತ್ರವನ್ನು ಹಿಂಪಡೆದುಕೊಂಡಿದ್ದು, ಅಜ್ಜರಕಾಡಿನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಬಹಿರಂಗ ಬೆಂಬಲ ಘೋಷಿಸಿದ್ದರು. ಸಮಾವೇಶದಲ್ಲಿ ಮಾಜಿ ಸಚಿವ, ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್‌ ಕುಮಾರ್ ಸೊರಕೆ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರಮೇಶ್ ಕಾಂಚನ್, ಸರಳಾ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ದಿನಕರ್ ಹೇರೂರು, ಸರಳಾ ಕಾಂಚನ್, ಕಾಂಗ್ರೆಸ್ ಮುಖಂಡ ಎಂ.ಎ.ಗಫೂರ್,ಪ್ರಖ್ಯಾತ್ ಶೆಟ್ಟಿ ಕಿಶನ್ ಕುಮಾರ್ ಹೆಗ್ಡೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Exit mobile version