ಉಡುಪಿ ನ್ಯೂಸ್ ಪ್ಲಸ್

ಯುವ ಉತ್ಸವ 2023 ಉದ್ಘಾಟನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ನೆಹರು ಯುವ ಕೇಂದ್ರ ಉಡುಪಿ ಇವರ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಪೂರ್ಣಪ್ರಜ್ಞ ಕಾಲೇಜು, ಉಡುಪಿ, ಡಾll. ಜಿ ಶಂಕರ್ ಸರ್ಕಾರಿ ಮಹಿಳಾ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಇಂದು ದಿನಾಂಕ 14-06-2023 ರಂದು ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂ ನಲ್ಲಿ ನಡೆದ “ಜಿಲ್ಲಾ ಯುವ ಉತ್ಸವ – 2023” ಉದ್ಘಾಟನಾ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ನೆಹರು ಯುವ ಕೇಂದ್ರ ದಕ್ಷಿಣ ವಲಯದ ಪ್ರಾದೇಶಿಕ ನಿರ್ದೇಶಕರಾದ ಎಂ.ಎನ್ ನಟರಾಜ್, ಉಡುಪಿ ಜಿಲ್ಲಾ ನೆಹರು ಯುವ ಕೇಂದ್ರದ ಅಧಿಕಾರಿಗಳಾದ ಯಶ್ವಂತ್ ಯಾಧವ್, ಡಾll. ಜಿ ಶಂಕರ್ ಸರ್ಕಾರಿ ಮಹಿಳಾ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ, ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಘವೇಂದ್ರ ಎ ಉಪಸ್ಥಿತರಿದ್ದರು.

Exit mobile version