ಉಡುಪಿ ನ್ಯೂಸ್ ಪ್ಲಸ್

ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಇಂದು ದಿನಾಂಕ 15-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್, ಸಹಾಯಕ ಅಭಿಯಂತರರಾದ ಜಯರಾಜ್, ಪುರಸಭೆಯ ಮುಖ್ಯ ಅಧಿಕಾರಿಗಳಾದ ಸಂತೋಷ್, ಸುಧೀರ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Exit mobile version