Site icon ಉಡುಪಿ ನ್ಯೂಸ್ ಪ್ಲಸ್

ಈ ಮೀಡಿಯಾ ಆಡಳಿತ ನಿರ್ದೇಶಕ ಬಾಲಕೃಷ್ಣ ಪೂಜಾರಿಯವರ ಕನ್ನಡ ವೆಬ್ ಸೈಟ್ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅನಾವರಣ

ಈ ಮೀಡಿಯಾ ಕನ್ನಡ ವೆಬ್ ಸೈಟ್ ಇದರ ಅನಾವರಣ ಕಾರ್ಯಕ್ರಮದ ದಿನಾಂಕ 15-06-2023 ರಂದು ಹೋಟೆಲ್ K1 ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಈ ಮೀಡಿಯಾ ವೆಬ್ ಸೈಟ್ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಕಾಪು ಎಸ್.ಕೆ.ಪಿ.ಎ ಅಧ್ಯಕ್ಷರಾದ ವಿನೋದ್ ಕಾಂಚನ್, ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಸಂಚಾಲಕರಾದ ಮಹಮ್ಮದ್ ಶರಿಫ್, ಸುಜ್ಲಾನ್ ಸಂಸ್ಥೆಯ ನಿರ್ದೇಶಕರಾದ ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು

Exit mobile version