ನೇಜಾರು: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಇನ್ನೊರ್ವ ಮಹಿಳೆ ಗಂಭೀರವಾಗಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಎಂದು ತಿಳಿದು ಬಂದಿದೆ. ಹತ್ಯೆಯಾದವರು ತಾಯಿ ಮತ್ತು ಆಕೆಯ ಮೂವರು ಮಕ್ಕಳಾಗಿದ್ದು ಬೆಳಿಗ್ಗೆ 8 ಗಂಟೆ ಹೊತ್ತಿಗೆ ಕೃತ್ಯ ನಡೆದಿದೆ.ಮೃತರನ್ನು ತಾಯಿ ಹಸೀನಾ, ಅಫ್ನಾನ್ 23, ಅಯ್ನಾಝ್ 20, ಅಸೀಮ್ 14 ಎಂದು ಗುರುತಿಸಲಾಗಿದೆ. ಈಗಾಗಲೇ ಡಿವೈಎಸ್ಪಿ ದಿನಕರ ಸ್ಥಳಕ್ಕಾಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

