Site icon ಉಡುಪಿ ನ್ಯೂಸ್ ಪ್ಲಸ್

ಬಿ. ಜೆ.ಪಿ ಬೆಂಬಲಿತ ಪಂಚಾಯತ್ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

ಕೋಟೆ ಗ್ರಾಮ ಪಂಚಾಯತ್ ನಲ್ಲಿ ಬಿ. ಜೆ.ಪಿ ಬೆಂಬಲಿತ ಸದಸ್ಯೆಯಾಗಿದ್ದ ಶ್ರೀಮತಿ. ವಿದ್ಯಾ ಗಿರೀಶ್ ರವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇತ್ತೀಚೆಗೆ ನಡೆದ ಕೋಟೆ ಗ್ರಾಮ ಪಂಚಾಯತ್ ನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ, ಅಧ್ಯಕ್ಷರ ಹುದ್ದೆಗೆ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ರೀಮತಿ. ಪ್ರಮೀಳಾ ಜತ್ತನ್ನ ರವರಿಗೆ ಬೆಂಬಲ ಸೂಚಿಸಿ ಮತ ಚಲಾಯಿಸುವ ಮೂಲಕ ಕೋಟೆ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ ಬರುವಲ್ಲಿ ಸಹಕರಿಸಿದ್ದರು. ಇಂದು, ಕಾಪು – ರಾಜೀವ್ ಭವನ ದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ವಿ.ಪ. ಸದಸ್ಯರಾದ ಐವನ್ ಡಿಸೋಜ, ಕೆ. ಪಿ. ಸಿ.ಸಿ ಪ್ರ. ಕಾರ್ಯದರ್ಶಿ ಎಂ.ಎ. ಗಫೂರ್, ಬ್ಲಾಕ್ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಧ್ವಜವನ್ನು ಸ್ವೀಕರಿಸುವ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಅವರು, ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಮೆಚ್ಚಿ, ವಿನಯ್ ಕುಮಾರ್ ಸೊರಕೆಯವರ ಕಾರ್ಯವೈಖರಿ ಮತ್ತು ಜನಪರ ಕಾಳಜಿಗೆ ಮನ್ನಣೆ ನೀಡಿ, ಜೊತೆಗೆ ಕೋಟೆ ಗ್ರಾಮದ ಸಮಗ್ರ ಅಭಿವೃದ್ದಿಯ ಉದ್ದೇಶದಿಂದ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದೇನೆ ಎಂದು ಹೇಳಿದರು.

Exit mobile version