ಉಡುಪಿ ನ್ಯೂಸ್ ಪ್ಲಸ್

 ಫೆ 17 : ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ” ಕ್ಕೆ, ಭರದ ಸಿದ್ಧತೆ

ಫೆ 17 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ, ಮಂಗಳೂರಿನ “ಸಹ್ಯಾದ್ರಿ ಗಾರ್ಡನ್”- ಅಡ್ಯಾರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ” ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ” ಕ್ಕೆ, ಭರದಿಂದ ಸಿದ್ಧತೆ ನಡೆದಿದೆ. ಕಾಪು ಕ್ಷೇತ್ರದಿಂದ ಐದು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ) ಹೇಳಿದ್ದಾರೆ. ಅವರು ಗುರುವಾರ ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತೀ ಬೂತ್‌ಗಳಿಂದ 20 ರಿಂದ 25 ಮಂದಿಯಂತೆ 1 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಉಡುಪಿ ಜಿಲ್ಲೆಯಿಂದ ಹದಿನೈದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಬೆಳಿಗ್ಗೆ ಬೆಳಿಗ್ಗೆ 10 ಗಂಟೆಗೆ ಕಾಪುವಿನಿಂದ ಹೊರಟು,ರಿಂದ 25 11 ಗಂಟೆಗೆ ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಹೆಜಮಾಡಿ ಟೋಲ್‌ನಲ್ಲಿ ಜತೆ ಸೇರಲಿದ್ದಾರೆ. ಅಲ್ಲಿಂದ ಬಸ್‌ಗಳ ಮೂಲಕವಾಗಿ ಕಾರ್ಯಕರ್ತರು ಸಮಾವೇಶದ ಮೈದಾನದವರೆಗೆ ತೆರಳಲಿದ್ದಾರೆ ಈ ಸಮಾವೇಶವು ಕರಾವಳಿಯಲ್ಲಿ ಕಾಂಗ್ರೆಸ್‌ ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಮತ್ತು ಕಾರ್ಯಕರ್ತರನ್ನು ಪುನರ್ ಸಂಘಟಿಸುವುದು. ಜನತೆಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ತಿಳಿಯಪಡಿಸುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ. ಈ ಸಮಾವೇಶವು ಮುಂಬರುವ ಲೋಕಸಭೆ, ಜಿ.ಪಂ., ತಾ.ಪಂ. ಚುನಾವಣೆಗೆ ದಿಕ್ಸೂಚಿಯಾಗಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶರ್ಫುದ್ದೀನ್ ಶೇಖ್ಲಿದೆ. ಮಾವೇಶದಲ್ಲಿ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ , ಉಸ್ತುವಾರಿ ರಣಜೀತ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರು, ರಾಜ್ಯದ ಶಾಸಕರು, ವಿಧಾನ ಪರಿಷತ್ ಸದಸ್ಯರು ಸಹಿತ ಪಕ್ಷದ ರಾಷ್ಟ್ರ, ರಾಜ್ಯ ಮಟ್ಟದ ನಾಯಕರು, ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಉತ್ತರ ಬ್ಲಾಕ್ ಅಧ್ಯಕ್ಷ ಸಂತೋಷ್ ಕುಲಾಲ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ಬಂಗೇರ, , ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಪುರ್ಟಾಡೋ ಉಪಸ್ಥಿತರಿದ್ದರು.

Exit mobile version