Site icon ಉಡುಪಿ ನ್ಯೂಸ್ ಪ್ಲಸ್

ಸ.ಹಿ.ಪ್ರಾ ಶಾಲೆ ಬೆಳಪು ವಿವೇಕ ಶಾಲಾ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇದರ ವಿವೇಕ ಶಾಲಾ ಕೊಠಡಿಗೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 14-03-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಜನಿ ಹಾಗೂ ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Exit mobile version